ADVERTISEMENT

ಗೋವಾಕ್ಕೆ ಮರಳಿದ ಪರ್ರೀಕರ್‌

ಪಿಟಿಐ
Published 14 ಅಕ್ಟೋಬರ್ 2018, 17:49 IST
Last Updated 14 ಅಕ್ಟೋಬರ್ 2018, 17:49 IST
ಮನೋಹರ್‌ ಪರ್ರೀಕರ್‌
ಮನೋಹರ್‌ ಪರ್ರೀಕರ್‌   

ಪಣಜಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆಯಲ್ಲಿ (ಏಮ್ಸ್‌) ಉದರ ಸಂಬಂಧಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ (62) ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯಕ್ಕೆ ಮರಳಿದ್ದಾರೆ.

ಅವರು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಗೋವಾದ ದಾಬೋಲಿಮ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಡೊನಾ ಪೌಲಾ ಬಳಿ ಇರುವ ಅವರ ಖಾಸಗಿ ನಿವಾಸಕ್ಕೆ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಪರ್ರೀಕರ್‌ ಆರೋಗ್ಯದ ಮೇಲೆ ನಿಗಾ ವಹಿಸಲು ಅವರ ಖಾಸಗಿ ನಿವಾಸಕ್ಕೆ ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ವೈದ್ಯರ ತಂಡ ನಿಯೋಜಿಸಲಾಗಿದ್ದು, ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಭಾನುವಾರ ಬೆಳಿಗ್ಗೆ ಪರ್ರೀಕರ್‌ ಅವರ ಆರೋಗ್ಯ ಕ್ಷೀಣಿಸಿದ್ದರಿಂದ ಏಮ್ಸ್‌ನಲ್ಲಿ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಕೆಲ ಸಮಯದ ನಂತರ ಆಸ್ಪತ್ರೆ ಆಡಳಿತ ಮಂಡಳಿ ಅವರನ್ನು ಬಿಡುಗಡೆ ಮಾಡಲು ನಿರ್ಧಾರ ತೆಗೆದುಕೊಂಡಿತ್ತು. ಸೆ.15ರಂದು ಪರ್ರೀಕರ್‌ ಏಮ್ಸ್‌ಗೆ ದಾಖಲಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.