ADVERTISEMENT

ಪಕ್ಷಾಂತರ ಪರ್ವ: ಯಾರು ಯಾವ ಪಕ್ಷ ಬಿಟ್ರು, ಯಾವ ಪಕ್ಷ ಸೇರಿದ್ರು!?

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2019, 10:27 IST
Last Updated 16 ಮಾರ್ಚ್ 2019, 10:27 IST
   

ನವದೆಹಲಿ: 2019ರ ಲೋಕಸಭಾ ಚುನಾವಣೆಯ ಅಖಾಡ ರಂಗೇರುತ್ತಿದ್ದು ಟಿಕೆಟ್‌ ಸಿಗದವರು ಮತ್ತು ಪಕ್ಷದೊಳಗೆ ಸೂಕ್ತ ಸ್ಥಾನಮಾನ ದೊರೆಯದವರ ಪಕ್ಷಾಂತರ ಪರ್ವ ಆರಂಭವಾಗಿದೆ.

ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಆಲಿ ಜೆಡಿಎಸ್‌ ತೊರೆದು ಬಿಎಸ್‌ಪಿ ಸೇರಿದ್ದಾರೆ. ಅವರು ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿರುವ ಹಾಪುರ್‌ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಒಡಿಶಾ ರಾಜ್ಯದ ಬಿಜು ಜನತಾದಳ (ಬಿಜೆಡಿ) ಸಂಸದ ಬಾಲಭದ್ರಾ ಮಜಿಹಿಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಮಿತ್‌ ಶಾ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದರು. ಬಾಲಭದ್ರಾ ಅವರು ನವರಂಗಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ADVERTISEMENT

ಉತ್ತರಾಖಂಡ ರಾಜ್ಯದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಅವರ ಪುತ್ರ ಮಣೀಶ್‌ ಖಂಡೂರಿ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಬರುವ ಲೋಕಸಭಾ ಚುನಾವಣೆಯಲ್ಲಿ ಮಣೀಶ್‌ ಖಂಡೂರಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರಯಾಗರಾಜ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ಯಾಮ್‌ ಚರಣ್‌ ಗುಪ್ತ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಜೆಪಿಗೆ ಹಿನ್ನಡೆಯಾದಂತಾಗಿದೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಬನಿಯಾ ಸಮುದಾಯದವರ ಪ್ರಾಬಲ್ಯ ಹೆಚ್ಚಾಗಿದೆ. ಶ್ಯಾಮ್‌ ಚರಣ್‌ ಗುಪ್ತ ಬಿನಿಯಾ ಸಮುದಾಯಕ್ಕೆ ಸೇರಿದವರು. ಇವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ’ಬಂದಾ’ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ಅಸ್ಸಾಂನ ಬಿಜೆಪಿ ಸಂಸದ ರಾಮ್‌ ಪ್ರಸಾದ್‌ ಶರ್ಮಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ ಸೇರುವ ಸುಳಿವು ನೀಡಿದ್ದಾರೆ.

ಎಎಪಿ ಪಕ್ಷದ ಶಾಸಕಿ ಅಲಕಾ ಲಂಬಾ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿಯ ಯಾವ ಲೋಕಸಭಾ ಕ್ಷೆತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಇನ್ನು ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.