ADVERTISEMENT

ನಾನಿನ್ನು ಕಾಂಗ್ರೆಸ್‌ ಅಧ್ಯಕ್ಷನಲ್ಲ; ತಡವಿಲ್ಲದೇ ಹೊಸ ನಾಯಕ ನೇಮಕವಾಗಲಿ 

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 9:18 IST
Last Updated 3 ಜುಲೈ 2019, 9:18 IST
   

ನವದೆಹಲಿ: ನಾನು ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆ ತೊರೆದಿದ್ದೇನೆ. ಹೊಸ ನಾಯಕನನ್ನು ತಡಮಾಡದೇ ಕೂಡಲೇ ಪಕ್ಷ ಆಯ್ಕೆ ಮಾಡಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾನು ಈಗಾಗಲೇ ರಾಜಕೀನಾಮೆ ನೀಡಿದ್ದಾನೆ. ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯು ಕೂಡಲೇ ಸಭೆ ಸೇರಿ ಸೂಕ್ತ ನಿರ್ಧಾರ ಕೈಗೊಬಳ್ಳಬೇಕು. ಹೊಸ ನಾಯಕನನ್ನು ತಡ ಮಾಡದೇ ನೇಮಕ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅದನ್ನು ಪಕ್ಷದ ಕಾರ್ಯಕಾರಿ ಸಮಿತಿ ಇನ್ನೂ ಅಂಗೀಕರಿಸಿಲ್ಲ. ಈ ನಡುವೆ ಕಾಂಗ್ರೆಸ್‌ ಮುಖ್ಯಮಂತ್ರಿಗಳೆಲ್ಲರೂ ರಾಹುಲ್‌ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದು, ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯದಂತೆ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.