ನವದೆಹಲಿ: ಪ್ರಯಾಣಿಕ ವಾಹನಗಳಲ್ಲಿ ಆರು ಏರ್‌ಬ್ಯಾಗ್ ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ನ್ಯಾಯಪೀಠವು, ಸರ್ಕಾರಕ್ಕೆ ಈ ಸಂಬಂಧ ಮನವಿ ಮಾಡುವಂತೆ ಅರ್ಜಿದಾರರಿಗೆ ತಿಳಿಸಿತು. ಮೇ 17ರಂದೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರು ತಿಳಿಸಿದರು.
ಬಳಿಕ ನ್ಯಾಯಪೀಠವು, ‘ಅರ್ಜಿಯಲ್ಲಿರುವ ಅಂಶಗಳು ಕಾರ್ಯಾಂಗ ರೂಪಿಸಿರುವ ನೀತಿಗಳಡಿ ಬರುತ್ತವೆ. ಇದರಲ್ಲಿ ನ್ಯಾಯಾಂಗವು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿತು.
ಆರು ಏರ್‌ಬ್ಯಾಗ್ ಕಡ್ಡಾಯಗೊಳಿಸದೇ ಇರುವುದು ಸಂವಿಧಾನದ 14 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.