ರಾಂಚಿ: ಕುರ್ಮಿ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ(ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಿಂದಾಗಿ ಜಾರ್ಖಂಡ್‌ನಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು.
ನಿರ್ಬಂಧವನ್ನು ಧಿಕ್ಕರಿಸಿ ಪ್ರತಿಭಟನಕಾರರು ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸಿದರು. ಇದರಿಂದಾಗಿ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.
‘ನನ್ನ ಮಗಳು ಪುಣೆಯಲ್ಲಿದ್ದಾಳೆ. ಅವಳಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಿದೆ. ಆದಷ್ಟು ಬೇಗ ನಾನು ಅಲ್ಲಿಗೆ ತಲುಪಬೇಕಿತ್ತು. ಆದರೆ ರೈಲು ಸಂಚಾರ ಮತ್ತೆ ಯಾವಾಗ ಆರಂಭವಾಗುತ್ತದೆ ಎಂಬುವುದು ಗೊತ್ತಿಲ್ಲ. ಪ್ರತಿಭಟನೆಯ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ’ ಎಂದು ಮಹಿಳೆಯೊಬ್ಬರು ಬೇಸರ ವ್ಯಕ್ತಪಡಿಸಿದರು.
‘ರೈಲು ಸಂಚಾರವನ್ನು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸುತ್ತಿರುವುದರಿಂದ ಏನೂ ಮಾಡಲಾಗುತ್ತಿಲ್ಲ’ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.