ADVERTISEMENT

ಡಾಬರ್ ಚ್ಯವನಪ್ರಾಶ್ ವಿರುದ್ಧ ಪತಂಜಲಿ ಜಾಹೀರಾತುಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧ

ಪಿಟಿಐ
Published 3 ಜುಲೈ 2025, 7:38 IST
Last Updated 3 ಜುಲೈ 2025, 7:38 IST
<div class="paragraphs"><p>ಪತಂಜಲಿ ಮಳಿಗೆ</p></div>

ಪತಂಜಲಿ ಮಳಿಗೆ

   

ರಾಯಿಟರ್ಸ್‌ ಚಿತ್ರ

ನವದೆಹಲಿ: ಡಾಬರ್ ಚ್ಯವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಸಂಸ್ಥೆಗೆ ದೆಹಲಿ ಹೈಕೋರ್ಟ್‌ ಗುರುವಾರ ನಿರ್ಬಂಧ ಹೇರಿದೆ.

ADVERTISEMENT

ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಕೋರಿ ಡಾಬರ್‌, ಹೈಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ನೇತೃತ್ವದ ಪೀಠ, ಮನವಿಯನ್ನು ಮಾನ್ಯ ಮಾಡಿರುವುದಾಗಿ ಹೇಳಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಜುಲೈ 14ಕ್ಕೆ ಮುಂದೂಡಿದೆ. ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.