
ಚಂಡೀಗಢ: ದೇಶದೊಳಗಿನ ಸೂಕ್ಷ್ಮ ಪ್ರದೇಶಗಳ ಮಾಹಿತಿಯನ್ನು ಪಾಕಿಸ್ತಾನದ ಸೇನಾಧಿಕಾರಿಗಳ ಜೊತೆ ಹಂಚಿಕೊಂಡಿದ್ದ ಆರೋಪದಡಿ ಪಠಾಣ್‌ಕೋಟ್‌ನ ಕಾನೂನು ಸಂಘರ್ಷಕ್ಕೊಳಗಾದ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ.
ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಪಂಜಾಬ್‌ನ ಈ ಬಾಲಕನು ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳಿಗೆ ತಲುಪಿಸುತ್ತಿದ್ದ ಎಂದು ಪಠಾಣ್‌ಕೋಟ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ದಲ್ಜಿಂದರ್ ಸಿಂಗ್ ಧಿಲ್ಲೋನ್ ಮಂಗಳವಾರ ಹೇಳಿದರು.
ಪಾಕ್‌ನ ಐಎಸ್‌ಐ ಸೇರಿದಂತೆ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಂಘಟನೆಗಳಿಗೂ ಮಾಹಿತಿ ನೀಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಬಾಲಕನನ್ನು ಸೋಮವಾರ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು.
ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯನಾಗಿದ್ದ ಬಾಲಕನು ಸುಲಭವಾಗಿ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಬಲೆಗೆ ಬಿದ್ದಿದ್ದಾನೆ. ಒಂದು ವರ್ಷದಿಂದಲೂ ಅವರ ಸಂಪರ್ಕದಲ್ಲಿದ್ದು, ದೇಶದ ಸೂಕ್ಷ್ಮ ಪ್ರದೇಶಗಳ ಮಾಹಿತಿ ನೀಡುತ್ತಿದ್ದ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.