ADVERTISEMENT

ಪಟ್ನಾದ ನೂರಾ ಸೇತುವೆ ಮೇಲೆ ಟ್ರಕ್–ಟೆಂಪೊ ಡಿಕ್ಕಿ: 7 ಮಂದಿ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2025, 4:28 IST
Last Updated 24 ಫೆಬ್ರುವರಿ 2025, 4:28 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಪಟ್ನಾ (ಬಿಹಾರ): ಪಟ್ನಾದ ಮಸೌರಿಯಲ್ಲಿರುವ ನೂರಾ ಸೇತುವೆಯ ಮೇಲೆ ಟ್ರಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭಾನುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರಕ್ ಮತ್ತು ಟೆಂಪೊ ಸೇತುವೆ ಮೇಲಿಂದ ಕೆಳಗೆ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಮಸೌರಿ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಮಾಹಿತಿ ನೀಡಿದ್ದಾರೆ.

ಕುಂಭಮೇಳಕ್ಕೆ ತೆರಳಿದ್ದ ಆರು ಮಂದಿ ಸಾವು

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿ ಜಿಲ್ಲೆಯ ಗೋಕಾಕನ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.