ಕೆ. ನಾಗ ಬಾಬು
ಎಕ್ಸ್ ಚಿತ್ರ
ಅಮರಾವತಿ: ಆಂಧ್ರಪ್ರದೇಶ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆಗೆ ಜನಸೇನಾ ಪಕ್ಷದ ಅಭ್ಯರ್ಥಿಯನ್ನಾಗಿ ತಮ್ಮ ಹಿರಿಯಣ್ಣ ಕೆ. ನಾಗ ಬಾಬು ಅವರನ್ನು ಕಣಕ್ಕಿಳಿಸಿರುವುದಾಗಿ ಪಕ್ಷದ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬುಧವಾರ ಘೋಷಿಸಿದ್ದಾರೆ.
ಬಾಬು ಅವರೂ ನಟರಾಗಿದ್ದು, ಸದ್ಯ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜನಸೇನಾ ಪಕ್ಷವು ರಾಜ್ಯದಲ್ಲಿ ಅಧಿಕಾರದಲ್ಲಿರುವ ಟಿಡಿಪಿ ಹಾಗೂ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಎನ್‌ಡಿಎ ಭಾಗವಾಗಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ನಾಗ ಬಾಬು ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಪವನ್ ಕಲ್ಯಾಣ್ ಹೇಳಿದ್ದಾರೆ. ಆಂಧ್ರಪ್ರದೇಶದ ವಿಧಾನಪರಿಷತ್ತಿನ ಐವರು ಸದಸ್ಯರ ಆಯ್ಕೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗವು ಇತ್ತೀಚೆಗೆ ಅಧಿಸೂಚನೆ ಪ್ರಕಟಿಸಿತ್ತು. ಮಾರ್ಚ್ 20ರಂದು ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.