ADVERTISEMENT

ಪವನ್‌ ಖೇರಾ ಪತ್ನಿ ಬಳಿಯೂ ಎರಡು ಸಕ್ರಿಯ ವೋಟರ್‌ ಐಡಿ: ಬಿಜೆಪಿ ಆರೋಪ

ಪಿಟಿಐ
Published 3 ಸೆಪ್ಟೆಂಬರ್ 2025, 10:55 IST
Last Updated 3 ಸೆಪ್ಟೆಂಬರ್ 2025, 10:55 IST
ಪವನ್‌ ಖೇರಾ
ಪವನ್‌ ಖೇರಾ   

ನವದೆಹಲಿ: ಕಾಂಗ್ರೆಸ್‌ ನಾಯಕ ಪವನ್ ಖೇರಾ ಅವರು ಎರಡು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದ ಬೆನ್ನಲ್ಲೆ, ಖೇರಾ ಪತ್ನಿಯೂ ಎರಡು ಸಕ್ರಿಯ ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ರಾಹುಲ್‌ ಗಾಂಧಿ ತಮ್ಮ ಪಕ್ಷದ ಮತ ಕಳವು ‘ರಕ್ಷಿಸಲು ಮತ್ತು ಮುಚ್ಚಿಹಾಕಲು’ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಖೇರಾ ಅಥವಾ ಅವರ ಪತ್ನಿ ಕೋಟಾ ನೀಲಿಮಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೀಲಿಮಾ ಅವರು ತೆಲಂಗಾಣ ಕಾಂಗ್ರೆಸ್‌ ನಾಯಕಿಯಾಗಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ ಐಟಿ ಇಲಾಖೆ ಮುಖ್ಯಸ್ಥ ಅಮಿತ್ ಮಾಳವಿಯಾ, ‘ಪವನ್‌ ಖೇರಾ ಅವರ ಪತ್ನಿ ನೀಲಿಮಾ ಅವರು ಖೈರತಾಬಾದ್‌ ಮತ್ತು ದೆಹಲಿಯಲ್ಲಿ ತಲಾ ಒಂದೊಂದು ವೋಟರ್‌ ಐಡಿ ಹೊಂದಿದ್ದಾರೆ. ಕಾಂಗ್ರೆಸ್‌ ನಾಯಕರು ಒಂದಕ್ಕಿಂತ ಹೆಚ್ಚು ವೊಟರ್‌ ಐಡಿ ಹೊಂದಿರುವುದು ಸತ್ಯ ಎಂದಾಯಿತು’ ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದೂ ಮಾಳವಿಯಾ ಒತ್ತಾಯಿಸಿದ್ದಾರೆ.

ಈಗಾಗಲೇ ಎರಡು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪವನ್‌ ಖೇರಾ ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಜಿಲ್ಲಾ ಚುನಾವಣಾ ಅಧಿಕಾರಿ, ನವದೆಹಲಿ ಮತ್ತು ಜಂಗಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖೇರಾ ಅವರು ಹೆಸರು ಮತದಾರರ ಪಟ್ಟಿಗಳಲ್ಲಿವೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.