ADVERTISEMENT

ಪಾಯಲ್‌ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್‌ ವಶಕ್ಕೆ

ಪಿಟಿಐ
Published 29 ಮೇ 2019, 17:51 IST
Last Updated 29 ಮೇ 2019, 17:51 IST
   

ಮುಂಬೈ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳನ್ನು ಮೇ 31ರ ವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ಬಂಧಿತ ಹಿರಿಯ ವಿದ್ಯಾರ್ಥಿನಿಯರು ಜಾತಿ ನಿಂದನೆ ಮಾಡಿದ್ದರು ಎಂದು ಮನನೊಂದು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಪಾಯಲ್‌ ತಡ್ವಿ (26) ಅವರು ಮೇ 22 ರಂದುರಾಜ್ಯ ಸರ್ಕಾರದ ಬಿ.ವೈ.ಎಲ್‌. ನಾಯರ್‌ ಆಸ್ಪತ್ರೆಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಬಂಧನಕ್ಕೊಳಗಾಗಿರುವ ಡಾ. ಹೇಮಾ ಅಹುಜಾ, ಡಾ. ಭಕ್ತಿ ಮೆಹರ್‌ ಮತ್ತು ಡಾ. ಅಂಕಿತಾ ಖಂಡೇಲ್‌ವಾಲ್‌ ಅವರ ವಿರುದ್ಧ ಜಾತಿ ನಿಂದನೆ, ಕಿರುಕುಳ ಮತ್ತು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

ADVERTISEMENT

ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಆರ್‌.ಎಂ.ಸದ್ರಾನಿ ಅವರು, ಮೂರು ಆರೋಪಿಗಳನ್ನು ಬುಧವಾರ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.