ADVERTISEMENT

ಶೀಲಾ ದೀಕ್ಷಿತ್‌ಗೆ ಅಡ್ವಾಣಿ, ಸುಷ್ಮಾ, ಒಮರ್‌ ಮತ್ತಿತರ ಗಣ್ಯರಿಂದ ಅಂತಿಮ ನಮನ 

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 6:26 IST
Last Updated 21 ಜುಲೈ 2019, 6:26 IST
ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾನಿ ಅವರು ಅಂತಿಮ ನಮನ ಸಲ್ಲಿಸಿದರು. ಚಿತ್ರ: ಎಎನ್‌ಐ ಟ್ವೀಟ್‌
ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾನಿ ಅವರು ಅಂತಿಮ ನಮನ ಸಲ್ಲಿಸಿದರು. ಚಿತ್ರ: ಎಎನ್‌ಐ ಟ್ವೀಟ್‌   

ನವದೆಹಲಿ:ಸತತ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್‌(81) ಅವರು ಶನಿವಾರ ನಿಧನರಾಗಿದ್ದು, ಭಾನುವಾರ ಅವರ ಪಾರ್ಥಿವ ಶರೀರಕ್ಕೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ದಕ್ಷಿಣ ದೆಹಲಿಯ ಅವರ ನಿವಾಸಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ.

ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರು ಶೀಲಾ ದೀಕ್ಷಿತ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ADVERTISEMENT

ವಿದೇಶಾಂಗ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಅವರು ಅಂತಿಮ ನಮನ ಸಲ್ಲಿಸಿದರು.

ಜಮ್ಮು ಮತ್ತು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಅಂತಿಮ ನಮನ ಸಲ್ಲಿಸಿದರು ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಶೀಲಾ ದೀಕ್ಷಿತ್‌ ಅವರನ್ನು ಬೆಳಗಿನ ಜಾವ ಇಲ್ಲಿನ ಓಖ್ಲಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.

1938ರಲ್ಲಿ ಪಂಜಾಬ್‌ನ ಕಪುರ್ತಲಾದಲ್ಲಿ ಜನಿಸಿದ್ದ ಶೀಲಾ, ಕಾಂಗ್ರೆಸ್‌ನ ಹಿರಿಯ ಮುಖಂಡ ಉಮಾ ಶಂಕರ್ ದೀಕ್ಷಿತ್‌ ಅವರ ಪುತ್ರ, ಐಎಎಸ್‌ ಅಧಿಕಾರಿಯಾಗಿದ್ದ ವಿನೋದ್‌ ದೀಕ್ಷಿತ್‌ ಅವರನ್ನು ಮದುವೆಯಾಗಿದ್ದರು. ಇವರಿಗೆ ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ.

1984ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕನೌಜ್‌ ಕ್ಷೇತ್ರದಿಂದ ಜಯಿಸಿದ್ದ ಇವರು, ರಾಜೀವ್‌ ಗಾಂಧಿ ಅವರ ಸಂಪುಟದಲ್ಲಿ ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಪ್ರಧಾನಿ ಕಚೇರಿಯ ರಾಜ್ಯ ಸಚಿವೆಯಾಗಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಶೀಲಾ ದೀಕ್ಷಿತ್‌ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.