ADVERTISEMENT

ಗಣ್ಯರಿಂದ ವಾಜಪೇಯಿ ಪಾರ್ಥೀವ ಶರೀರದ ಅಂತಿಮ ದರ್ಶನ 

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2018, 4:24 IST
Last Updated 17 ಆಗಸ್ಟ್ 2018, 4:24 IST
   

ನವದೆಹಲಿ: ಇಲ್ಲಿನ ಕೃಷ್ಣ ಮೆನನ್ ಮಾರ್ಗದಲ್ಲಿರುವ ವಾಜಪೇಯಿ ಅವರ ನಿವಾಸದಲ್ಲಿ ಬೆಳಗ್ಗೆಯಿಂದ ಗಣ್ಯರುವಾಜಪೇಯಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಇಲ್ಲಿ ಗಣ್ಯರಿಗೆ ಮಾತ್ರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಾಹಿತಿ ಜಾವೇದ್ ಅಖ್ತರ್‌, ಬರಹಗಾಋ್ತಿ ಶಬಾನ್‌ ಅಜ್ಮಿ, ಕೇರಳ ರಾಜ್ಯಪಾಲ ಪಿ.ಸದಾಶಿವಂ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್‌ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.

ADVERTISEMENT

ವಾಜಪೇಯಿ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಅವರ ನಿವಾಸದಿಂದ ಬಿಜೆಪಿ ಕಚೇರಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ಗಣ್ಯರು ಮತ್ತು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ 4 ಗಂಟೆಗೆ‘ಸ್ಮೃತಿ ಸ್ಥಲ'ದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಂತಿಮ ಯಾತ್ರೆ ಸಾಗುವ ರಸ್ತೆ ಮಾರ್ಗಗಳಲ್ಲಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಹಾಗೂ ಮಾರ್ಗಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.