ADVERTISEMENT

ಸಾಮರಸ್ಯ ಕಾಪಾಡಿ: ಬಿಜೆಪಿ ಸಂಸದರಿಗೆ ಪ್ರಧಾನಿ ಸೂಚನೆ

ಪಿಟಿಐ
Published 3 ಮಾರ್ಚ್ 2020, 19:20 IST
Last Updated 3 ಮಾರ್ಚ್ 2020, 19:20 IST
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ –ಪಿಟಿಐ ಚಿತ್ರ
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ –ಪಿಟಿಐ ಚಿತ್ರ   

ನವದೆಹಲಿ: ದೇಶದ ಅಭಿವೃದ್ಧಿಗೆ ಶಾಂತಿ, ಸೌಹಾರ್ದತೆ ಹಾಗೂ ಒಗ್ಗಟ್ಟು ಅವಶ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಬಿಜೆಪಿ ಸಂಸದರು ಮುಂದಾಗಬೇಕು ಎಂದು ಸೂಚಿಸಿದ್ದಾರೆ.

ದೆಹಲಿ ಗಲಭೆ ಬಳಿಕ ಇದೇ ಮೊದಲು ಬಿಜೆಪಿ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಈಚೆಗೆ ಸಿಂಗ್ ಅವರು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕುರಿತು ನೀಡಿದ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಮೋದಿ, ‘ಕೆಲವರು ಈ ಘೋಷಣೆಯಲ್ಲಿ ತಪ್ಪು ಹುಡುಕುತ್ತಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ಇತ್ತೀಚೆಗೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಸಿಂಗ್, ‘ಭಾರತ್ ಮಾತಾ ಕಿ ಜೈ ಘೋಷಣೆಯನ್ನು ಗಲಭೆ ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಸೃಷ್ಟಿಸಲು ದುರ್ಬಳಕೆ ಮಾಡಲಾಗುತ್ತಿದೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.