ನವದೆಹಲಿ: 2017ರಲ್ಲಿ ಭಾರತ ಸರ್ಕಾರವು ಇಸ್ರೇಲ್‌ನಿಂದ ಪೆಗಾಸಸ್ ತಂತ್ರಾಂಶವನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.
ಈ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಮೋದಿ ಸರ್ಕಾರ ದೇಶಕ್ಕೆ ದ್ರೋಹ ಎಸಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
'ನಮ್ಮ ಪ್ರಾಥಮಿಕ ಪ್ರಜಾಪ್ರಭುತ್ವ ಸಂಸ್ಥೆಗಳು, ರಾಜಕಾರಣಿಗಳು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಅನ್ನು ಖರೀದಿಸಿತು. ಸರ್ಕಾರಿ ಅಧಿಕಾರಿಗಳು, ವಿರೋಧ ಪಕ್ಷದ ನಾಯಕರು, ಸಶಸ್ತ್ರ ಪಡೆಗಳು, ನ್ಯಾಯಾಂಗದ ಪ್ರಮುಖರು ಸೇರಿದಂತೆ ಎಲ್ಲರೂ ಫೋನ್ ಕದ್ದಾಲಿಕೆಗೆ ಗುರಿಯಾಗಿದ್ದಾರೆ. ಇದು ದೇಶದ್ರೋಹದ ಕೆಲಸ’ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವನ್ನೂಓದಿ...
ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ಕಂಪನಿಯು ತಯಾರಿಸುತ್ತಿರುವ ಪೆಗಾಸಸ್ ಬೇಹುಗಾರಿಕೆ ತಂತ್ರಾಂಶ ಬಳಸಿ ಜಗತ್ತಿನಾದ್ಯಂತ 50 ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ಅದರಲ್ಲಿ ಭಾರತದ ವಿರೋಧ ಪಕ್ಷಗಳ ಮುಖಂಡರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.