ADVERTISEMENT

ಪೆಗಾಸಸ್‌: ಸುಪ್ರೀಂ ಕೋರ್ಟ್‌ನಲ್ಲಿ ಆಗಸ್ಟ್ 5ರಂದು ವಿಚಾರಣೆ

ಪಿಟಿಐ
Published 1 ಆಗಸ್ಟ್ 2021, 7:19 IST
Last Updated 1 ಆಗಸ್ಟ್ 2021, 7:19 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಪೆಗಾಸಸ್‌ ಗೂಢಚರ್ಯೆ ವಿಷಯವನ್ನು ಸುಪ್ರೀಂಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್‌. ರಾಮ್‌ ಮತ್ತು ಶಶಿ ಕುಮಾರ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಇದೇ 5ರಂದು ಕೈಗೆತ್ತಿಕೊಳ್ಳಲಿದೆ.

ಸುಪ್ರೀಂಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿ ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠವು ಇದೇ 5ರಂದು ಈ ಅರ್ಜಿಯ ನಡೆಸಲಿದೆ. ಈ ಕುರಿತು ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆಯೂ ಇದೇ ವೇಳೆ ನಡೆಯಲಿದೆ.

ಸರ್ಕಾರಿ ಸಂಸ್ಥೆಗಳೂ, ನಾಗರಿಕರು, ರಾಜಕಾರಣಿಗಳು ಸೇರಿದಂತೆ ಹಲವು ಖ್ಯಾತನಾಮರ ಮೇಲೆ ಇಸ್ರೇಲಿ ಕುತಂತ್ರಾಂಶವಾದ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಲಾಗಿದೆ ಎಂದು ಮೂರು ಅರ್ಜಿಗಳಲ್ಲಿ ದೂರಲಾಗಿದ್ದು, ತನಿಖೆಗೆ ಮನವಿ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.