ADVERTISEMENT

ಗುಜರಾತ್‌ನ ಜನತೆ ನನ್ನ ಜಾತಿ ನೋಡದೆ ಗೆಲ್ಲಿಸಿದರು: ಪ್ರಧಾನಿ ಮೋದಿ

ಪಿಟಿಐ
Published 9 ಅಕ್ಟೋಬರ್ 2022, 13:44 IST
Last Updated 9 ಅಕ್ಟೋಬರ್ 2022, 13:44 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಮೊಧೇರಾ: ಗುಜರಾತ್‌ನ ಜನತೆ ನನ್ನ ಜಾತಿ, ರಾಜಕೀಯ ಹಿನ್ನೆಲೆ ನೋಡದೆ ಚುನಾವಣೆಯಲ್ಲಿ ಗೆಲ್ಲಿಸಿದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೇಳಿಕೆ ನೀಡಿರುವ ಮೋದಿ, ಕಳೆದೆರಡು ದಶಕಗಳಿಂದ ರಾಜ್ಯದ ಜನರು ನನ್ನ ಜಾತಿಯನ್ನು ಲೆಕ್ಕಿಸದೆ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೆಹಸಾಣ ಜಿಲ್ಲೆಯ ಮೊಧೇರಾವನ್ನು ದೇಶದ ಮೊದಲ 24x7 ಸೌರಶಕ್ತಿ ಚಾಲಿತ ಗ್ರಾಮ ಎಂದು ಘೋಷಿಸಿದರು.

ಪ್ರಧಾನಿ ಹುದ್ದೆಗೇರುವ ಮುನ್ನ ಮೋದಿ, 2001ರಿಂದ 2014ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

ಗುಜರಾತ್ ಭೇಟಿ ವೇಳೆಯಲ್ಲಿ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ₹14,600 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ ಆಡಳಿತರೂಢ ಬಿಜೆಪಿ ಪಾಲಿಗೆ ನಿರ್ಣಾಯಕವೆನಿಸಿದೆ. ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.