ADVERTISEMENT

ಪದ್ಮ ಪ್ರಶಸ್ತಿಗಳಿಗೆ ಸಾಧಕರನ್ನು ನಾಮನಿರ್ದೇಶನ ಮಾಡಲು ವಿನಂತಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2021, 6:53 IST
Last Updated 11 ಜುಲೈ 2021, 6:53 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಪದ್ಮ ಪ್ರಶಸ್ತಿಗಳಿಗಾಗಿ ಸಾಧಕರನ್ನು ನಾಮನಿರ್ದೇಶನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರನ್ನು ಕೇಳಿಕೊಂಡಿದ್ದಾರೆ.

'ಪೀಪಲ್ಸ್‌ ಪದ್ಮ' ಹ್ಯಾಶ್‌ಟ್ಯಾಗ್‌ನೊಂದಿಗೆ ಭಾನುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು,'ಭಾರತವು ಅನೇಕ ಪ್ರತಿಭಾವಂತರನ್ನು ಒಳಗೊಂಡಿದೆ. ಅವರು ತಳಮಟ್ಟದಲ್ಲಿ ಅಸಾಧಾರಣ ಕೆಲಸ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಾವು ಹೆಚ್ಚಾಗಿ ಕೇಳಿರುವುದಿಲ್ಲ. ಈ ಸ್ಪೂರ್ತಿದಾಯಕ ವ್ಯಕ್ತಿಗಳ ಬಗ್ಗೆ ನಿಮಗೆ ತಿಳಿದಿದೆಯೇ? ನೀವು ಅವರನ್ನು ಪೀಪಲ್ಸ್ ಪದ್ಮಗೆ ನಾಮನಿರ್ದೇಶನ ಮಾಡಬಹುದು' ಎಂದು ಪ್ರಧಾನಿ ಮೋದಿ ವಿನಂತಿಸಿದ್ದಾರೆ.

ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ ಎಂದು ಮಾಹಿತಿ ನೀಡಿರುವ ಪ್ರಧಾನಿ ಮೋದಿ, ನಾಮನಿರ್ದೇಶನ ಮಾಡಲು https://padmaawards.gov.in ವೆಬ್‌ಸೈಟ್‌ ವಿಳಾಸವನ್ನೂ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.