ADVERTISEMENT

ಪಾಕ್‌ಗೆ ಭೇಟಿ: ಆರ್‌ಜೆಡಿ ಸಂಸದ ಮನೋಜ್‌ ಝಾಗೆ ಅನುಮತಿ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 15:50 IST
Last Updated 3 ಅಕ್ಟೋಬರ್ 2022, 15:50 IST

ನವದೆಹಲಿ: ಆರ್‌ಜೆಡಿ ಸಂಸದ ಮನೋಜ್‌ ಝಾ ಅವರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದರೂ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅವಕಾಶ ನಿರಾಕರಿಸಿದೆ.

ಅಕ್ಟೋಬರ್‌ 22 ಮತ್ತು 23ರಂದು ನಡೆಯಲಿರುವ 4ನೇ ಅಸ್ಮಾ ಜಹಾಂಗೀರ್ ಸಮಾವೇಶದಲ್ಲಿ ಪಾಲ್ಗೊಂಡು ಭಾಷಣ ಮಾಡಲು ಮನೋಜ್‌ ಅವರನ್ನು ಪಾಕಿಸ್ತಾನದ ಅಸ್ಮಾ ಜಹಾಂಗೀರ್‌ ಫೌಂಡೇಶನ್‌, ಅಲ್ಲಿನ ಸುಪ್ರೀಂ ಕೋರ್ಟ್‌ ವಕೀಲರ ಸಂಘ ಹಾಗೂ ಇತರ ಸಂಘಟನೆಗಳು ಆಹ್ವಾನಿಸಿದ್ದವು.

ಪಾಕಿಸ್ತಾನಕ್ಕೆ ತೆರಳಲು ಅನುಮತಿ ಕೋರಿ ಮನೋಜ್‌ ಅವರು ಗೃಹ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳಿಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

‘ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಟ ನಡೆಸಿರುವ ಅಸ್ಮಾ ಜಹಾಂಗೀರ್‌ ಅವರ ಹೆಸರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಅನುಮತಿ ನಿರಾಕರಿಸಿರುವುದು ದುರಾದೃಷ್ಟಕರ’ ಎಂದು ಮನೋಜ್‌ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.