ADVERTISEMENT

ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪಿಟಿಐ
Published 21 ನವೆಂಬರ್ 2020, 11:10 IST
Last Updated 21 ನವೆಂಬರ್ 2020, 11:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಶುಕ್ರವಾರವಷ್ಟೇ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಿದ್ದ ತೈಲ ಮಾರುಕಟ್ಟೆ ಕಂಪನಿಗಳು, ಶನಿವಾರವೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 15 ಪೈಸೆ, ಡೀಸೆಲ್‌ ಬೆಲೆ 20 ಪೈಸೆ ಹೆಚ್ಚಿಸಿವೆ.

ಶುಕ್ರವಾರ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 17 ಪೈಸೆ ಮತ್ತು ಡೀಸೆಲ್‌ ಬೆಲೆ 22 ‍ಪೈಸೆ ಹೆಚ್ಚಿಸಲಾಗಿತ್ತು. ಎರಡು ದಿನಗಳಲ್ಲಿ ಪೆಟ್ರೋಲ್ ಬೆಲೆ 22 ಪೈಸೆ ಮತ್ತು ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 42 ಪೈಸೆಯಷ್ಟು ಹೆಚ್ಚಳವಾಗಿದೆ.

‘ಹೊಸ ದರದ ಪ್ರಕಾರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ಗೆ ₹81.23ರಿಂದ ₹81.38 ಹಾಗೂ ಡೀಸೆಲ್‌ ದರ ಲೀಟರ್‌ಗೆ ₹70.68 ರಿಂದ ₹70.88ಕ್ಕೆ ಏರಿಕೆಯಾಗಿದೆ‘ ಎಂದು ತೈಲ ಮಾರುಕಟ್ಟೆ ಕಂಪನಿಗಳ ಅಧಿಸೂಚನೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.