ADVERTISEMENT

ನಿಷೇಧ ಪ್ರಶ್ನಿಸಿ ಪಿಎಫ್‌ಐ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2025, 7:08 IST
Last Updated 13 ಅಕ್ಟೋಬರ್ 2025, 7:08 IST
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್   

ನವದೆಹಲಿ: ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ತಡೆ (ಯುಎಪಿಎ) ಕಾಯ್ದೆಯಡಿ ನಿಷೇಧಿಸಿದ್ದನ್ನು ಪ್ರಶ್ನಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠವು ಅರ್ಜಿಯನ್ನು ಪುರಸ್ಕರಿಸಿ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತು.

2022 ಸೆಪ್ಟೆಂಬರ್ 28ರಂದು ಪಿಎಫ್‌ಐ ಅನ್ನು ಕೇಂದ್ರ ಸರ್ಕಾರವು ಯುಎಪಿಎ ಕಾಯ್ದೆಯ ಸೆಕ್ಷನ್ 3ರಡಿ ಕಾನೂನು ಬಾಹಿರ ಎಂದು ಘೋಷಿಸಿ 5 ವರ್ಷ ನಿಷೇಧ ಹೇರಿತ್ತು. ಸಂಸ್ಥೆಯು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ದೇಶದಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ಅಪಾಯಕಾರಿ ಎಂದು ಹೇಳಿತ್ತು.

ADVERTISEMENT

ಇದಾದ ಬಳಿಕ 2023ರ ಮಾರ್ಚ್‌ನಲ್ಲಿ ದೆಹಲಿ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ಯುಎಪಿಎ ನ್ಯಾಯಾಧೀಕಣ ಕೂಡ ನಿಷೇಧವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಪಿಎಫ್‌ಐ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಯುಎಪಿಎ ನ್ಯಾಯಾಧೀಕರಣ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸಂವಿಧಾನದ 226 ಹಾಗೂ 227 ವಿಧಯನ್ವಯ ಪುರಸ್ಕರಿಸಬಾರದು ಎಂದು ಕೇಂದ್ರ ಸರ್ಕಾರ ವಾದ ಮಂಡಿಸಿತ್ತು.

(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿ ಬರೆದ ಸುದ್ದಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.