ADVERTISEMENT

ಫಲೋಡಿ ಅಪಘಾತ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 14:25 IST
Last Updated 10 ನವೆಂಬರ್ 2025, 14:25 IST
...
...   

ನವದೆಹಲಿ: ರಾಜಸ್ಥಾನದ ಫಲೋಡಿಯಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ನೀಡಿದೆ.

ಅಪಘಾತಕ್ಕೆ ಕಾರಣವಾದ ಅಂಶಗಳಿಗೆ ಸಂಬಂಧಿಸಿದಂತೆ ಎರಡು ವಾರದ ಒಳಗೆ ಪ್ರಾಧಿಕಾರ ಹಾಗೂ ಸಚಿವಾಲಯ ಪ್ರತಿಕ್ರಿಯೆ ಸಲ್ಲಿಸಬೇಕು ಎಂದೂ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ ಹಾಗೂ ನ್ಯಾಯಮೂರ್ತಿ ವಿಜಯ್‌ ಬಿಷ್ಣೋಯ್‌ ಅವರನ್ನೊಳಗೊಂಡ ಪೀಠವು ಸೂಚಿಸಿದೆ. 

ಅಲ್ಲದೇ, ಫಲೋಡಿ ಮಾರ್ಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ಸರ್ವೆ ನಡೆಸಿ, ಅಲ್ಲಿ ಎಷ್ಟು ಢಾಬಾಗಳು ಇವೆ, ಹೆದ್ದಾರಿ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಜತೆಗೆ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ಕಾಂಟ್ರ್ಯಾಕ್ಟರ್ ಎಲ್ಲಾ ನಿಯಮಗಳನ್ನು ಅನುಸರಿಸಿದ್ದಾರೆಯೇ ಎಂಬ ಬಗ್ಗೆಯೂ ವರದಿ ಸಲ್ಲಿಸುವಂತೆ ಕೇಳಿದೆ.

ADVERTISEMENT

ಫಲೋಡಿ ಜಿಲ್ಲೆಯ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್‌ವೊಂದಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟ ಘಟನೆ ನವೆಂಬರ್‌ 2ರಂದು ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.