
ಪಿಟಿಐ
ಹೈದರಾಬಾದ್ (ಪಿಟಿಐ): ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡವು(ಎಸ್‌ಐಟಿ) ತೆಲಂಗಾಣದ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರಿಗೆ ಗುರುವಾರ ನೋಟಿಸ್ ಜಾರಿ ಮಾಡಿದೆ.
ಜನವರಿ 30ರಂದು ವಿಚಾರಣೆಗೆ ಹಾಜರಾಗುವಂತೆ ರಾವ್ ಅವರಿಗೆ ಎಸ್‌ಐಟಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಬಿಆರ್‌ಎಸ್ ಆಡಳಿತ ಅವಧಿಯಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಸೇರಿದಂತೆ ಗಣ್ಯವಕ್ತಿಗಳ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪದ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.