ವಿಶಾಖಪಟ್ಟಣ: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹಾಗೂ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನನ್ನ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ.
ಅಧಿಕಾರದಲ್ಲಿದ್ದಾಗ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ನನ್ನ ಹಾಗೂ ನನ್ನ ನಿಕಟವರ್ತಿಗಳ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ. ನನ್ನ ಗಂಡ ಹಾಗೂ ಸಹಾಯಕನ ಪೋನ್ ಕದ್ದಾಲಿಕೆಯಾಗಿದೆ. ನನ್ನ ಫೋನ್ ಟ್ಯಾಪಿಂಗ್ ಆಗಿದೆ ಎಂದು ವೈಆರ್‌ಎಸ್ ಪಕ್ಷದಲ್ಲಿರುವ ಚಿಕ್ಕಪ್ಪ ವೈ.ವಿ. ಸುಬ್ಬಾರೆಡ್ಡಿಯವರೇ ವೈಯಕ್ತಿಕವಾಗಿ ತಿಳಿಸಿದ್ದಾರೆ ಎಂದರು.
‘ನಾನು ಜಗನ್‌ನ ಸಹೋದರಿಯಾಗಿದ್ದರೂ, ನನ್ನನ್ನು ರಾಜಕೀಯ ಹಾಗೂ ಆರ್ಥಿಕವಾಗಿ ಮುಗಿಸಲೆಂದು ದೂರವಾಣಿ ಕದ್ದಾಲಿಕೆ ಮಾಡಿಸಿದ್ದಾರೆ. ಈ ಕುರಿತು ಯಾವುದೇ ರೀತಿಯ ತನಿಖೆಗೂ ನಾನು ಸಹಕರಿಸುತ್ತೇನೆ. ನನಗೆ ನ್ಯಾಯಸಿಗಬೇಕು’ ಎಂದು ಆಗ್ರಹಿಸಿದ್ದಾರೆ.
ಕಳೆದ ವರ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹಾಗೂ ಶರ್ಮಿಳಾ ನಡುವೆ ಆಸ್ತಿ ವಿವಾದವಾಗಿತ್ತು. ನಂತರ ಸುರಕ್ಷತೆಯ ದೃಷ್ಟಿಯಿಂದ ಅವರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.