ಇಂದೋರ್: ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಕೈಯಿಂದ ಶೌಚಾಲಯ ಶುಚಿಗೊಳಿಸಿರುವ ಘಟನೆ ನಡೆದಿದೆ.
ಸ್ಥಳೀಯ ಮಾಧ್ಯಮಗಳಲ್ಲಿ ಈ ಕುರಿತು ವರದಿಯಾಗಿದ್ದು, ಮಧ್ಯಪ್ರದೇಶದ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶ: ಮಳೆ ಅವಘಡದಿಂದ 10 ಮಂದಿ ಸಾವು
ಚಕ್‌ದೇವ್‌ಪುರ ಗ್ರಾಮದಲ್ಲಿರುವ ಪ್ರಾಥಮಿಕ, ಮಾಧ್ಯಮಿಕ ಶಾಲೆಯಲ್ಲಿ ಸಮವಸ್ತ್ರ ಧರಿಸಿರುವ ಬಾಲಕಿಯರ ಕೈಯಿಂದ ಶೌಚಾಲಯ ಶುಚಿಗೊಳಿಸಲಾಗಿದೆ.
ಐದನೇ ಹಾಗೂ 6ನೇ ತರಗತಿಯ ವಿದ್ಯಾರ್ಥಿನಿಯರಿಂದ ಶೌಚಾಲಯ ಶುಚಿಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತ್ತಸ್ಥಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.