ಇಂದು ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಹೊಸವರ್ಷವನ್ನು ಆಚರಿಸಲಾಗುತ್ತಿದೆ. ಮತ್ತೊಂದೆಡೆ ಕಳೆದ ಕೆಲ ದಿನಗಳಿಂದ ವಕ್ಫ್ (ತಿದ್ದುಪಡಿ) ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಹಲವೆಡೆ ಸಹಜ ಸ್ಥಿತಿಗೆ ಮರಳಿದೆ.
ಪಿಟಿಐ ಚಿತ್ರ
ಇಂದು(ಮಂಗಳವಾರ) ಬೆಂಗಾಳಿ ಹೊಸವರ್ಷವನ್ನು ಬರಮಾಡಿಕೊಳ್ಳುವ ಸಡಗರದಲ್ಲಿ ತೊಡಗಿದ್ದ ಮಹಿಳೆ.
ಬೆಂಗಾಳಿ ಹೊಸವರ್ಷದ ಸಂಭ್ರಮದಲ್ಲಿ ಮಹಿಳೆಯರು
ಬೆಂಗಾಳಿ ಹೊಸವರ್ಷದ ಅಂಗವಾಗಿ ಮಹಿಳೆಯರು ಸಂಪ್ರಾದಾಯಿಕ ಆಚರಣೆಯಲ್ಲಿ ತೊಡಗಿರುವುದು
ಹೊಸವರ್ಷದ ದಿನದಂದು ದೇವಿ ಕಾಳಿಮಾತೆಯ ದರ್ಶನಕ್ಕಾಗಿ ಕಾದು ನಿಂತಿರುವ ಭಕ್ತರು
ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ನಡೆಸಲಾಗುತ್ತಿದ್ದು, ಭದ್ರತಾ ಪಡೆಗಳು ಬೀಡುಬಿಟ್ಟಿವೆ
ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿರುವುದು
ಹಿಂಸಾಚಾರ ನಡೆದ ಸ್ಥಳದಿಂದ ಜನರನ್ನು ಚದರಿಸಿದ್ದ ಪೊಲೀಸರು
ವಾಹನಗಳಿಗೆ ಬೆಂಕಿ ಹಚ್ಚಿರುವುದು
ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಜನರನ್ನು ಮತ್ತೊಂದೆಡೆಗೆ ಸ್ಥಳಾಂತರಿಸಿರುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.