ADVERTISEMENT

ಲಖೀಂಪುರ ಖೇರಿ: ಸಚಿವರನ್ನು ಆರೋಪಿಯಾಗಿ ಹೆಸರಿಸಲು ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 16:28 IST
Last Updated 22 ಡಿಸೆಂಬರ್ 2021, 16:28 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹಾಗೂ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಅವರನ್ನು ಲಖೀಂಪುರ ಖೇರಿ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಲಾಗಿದೆ.

ಬಿಎಸ್‌ಎಫ್‌ನ ಮಾಜಿ ಯೋಧ ತೇಜ್‌ ಬಹದ್ದೂರ್‌ ಯಾದವ್ ಪಿಐಎಲ್‌ ಸಲ್ಲಿಸಿದ್ದು, ಪ್ರಕರಣ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ರಚಿಸಿರುವ ಎಸ್‌ಐಟಿಗೆ ಈ ಸಂಬಂಧ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಈ ಇಬ್ಬರು ಸಚಿವರ ಪಾತ್ರದ ಕುರಿತು ಕೂಡ ತನಿಖೆಗೆ ಆದೇಶಿಸಬೇಕು ಎಂದೂ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.