ADVERTISEMENT

ಅಂಗವಿಕಲರಿಗೆ ಆದ್ಯತೆ ಮೇಲೆ ಲಸಿಕೆ ನೀಡುವಂತೆ ಕೋರಿ ಪಿಐಎಲ್‌

ಪಿಟಿಐ
Published 5 ಮೇ 2021, 8:53 IST
Last Updated 5 ಮೇ 2021, 8:53 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ಅಂಗವಿಕಲರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೆಹಲಿ ಸರ್ಕಾರಕ್ಕೆ ಬುಧವಾರ ನೋಟಿಸ್‌ ಜಾರಿ ಮಾಡಿದೆ.

ಈ ಬಗ್ಗೆ ಇಬ್ಬರು ಅಂಗವಿಕರು ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

‘ವಯಸ್ಸಿನ ನಿಬಂಧನೆಯಿಲ್ಲದೆ ಎಲ್ಲ ಅಂಗವಿಕಲರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ವಿಶೇಷ ಅವಕಾಶವನ್ನು ಕಲ್ಪಿಸಿಕೊಡಬೇಕು’ ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಡಿ.ಎನ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರನ್ನು ಒಳಗೊಂಡ ಪೀಠವು ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.