ADVERTISEMENT

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡುವಂತೆ ಕೋರಿ 'ಸುಪ್ರೀಂ'ಗೆ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 14:07 IST
Last Updated 16 ಏಪ್ರಿಲ್ 2021, 14:07 IST
   

ನವದೆಹಲಿ: ದೇಶದಾದ್ಯಂತ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌–19 ಲಸಿಕೆ ನೀಡಲು ನಿರ್ದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸಲ್ಲಿಸಲಾಗಿದೆ.

ವಕೀಲೆ ರಶ್ಮಿ ಸಿಂಗ್‌ ಈ ಅರ್ಜಿ ಸಲ್ಲಿಸಿದ್ದಾರೆ. 18 ರಿಂದ 45 ವರ್ಷದೊಳಗಿನವರಿಗೆ ಲಸಿಕೆಯನ್ನು ನೀಡದಿರುವುದು ತಾರತಮ್ಯ ಮತ್ತು ಅವಿವೇಕದ ಕ್ರಮವಾಗಿದೆ. ಅಲ್ಲದೆ ಸಮಾನತೆ ಮತ್ತು ಜೀವಿಸುವ ಹಕ್ಕಿನ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ವೈದ್ಯಕಿಯ ಸಂಘ ಸೇರಿದಂತೆ ಹಲವು ತಜ್ಞರು ಲಸಿಕಾ ಅಭಿಯಾನವನ್ನು ಚುರುಕುಗೊಳಿಸುವಂತೆ ಒತ್ತಾಯಿಸಿದ್ದಾರೆ. ಕೋವಿಡ್‌ ಪರಿಸ್ಥಿತಿಯ ಸಮರ್ಥ ನಿರ್ವಹಣೆಗೆ ಪ್ರತಿದಿನ ಕನಿಷ್ಠ 10 ಮಿಲಿಯನ್‌ ಡೋಸ್‌ಗಳನ್ನು ನೀಡುವಂತೆ ಸಲಹೆಯನ್ನೂ ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.