ADVERTISEMENT

ಜಿಲ್ಲೆಗೊಂದು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕಾಗಿ ಪಿಐಎಲ್‌

ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಪಿಟಿಐ
Published 21 ಡಿಸೆಂಬರ್ 2020, 8:11 IST
Last Updated 21 ಡಿಸೆಂಬರ್ 2020, 8:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹಣಕಾಸು ಕ್ಷೇತ್ರಗಳಲ್ಲಿ ನಡೆಯವ ವಂಚನೆ ಸೇರಿದಂತೆ ವಿವಿಧ ಮೋಸದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಪ್ರತಿ ಜಿಲ್ಲೆಯಲ್ಲಿ ‘ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ'ಗಳನ್ನು ಆರಂಭಿಸುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನ್‌ ಕುಮಾರ್ ಉಪಾಧ್ಯಾಯ್ ಅವರು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಿದ್ದಾರೆ.

‘ಈ ಸಂಬಂಧ ಒಂದು ವರ್ಷದೊಳಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೇಶದ ಎಲ್ಲ ರಾಜ್ಯಗಳ ಹೈಕೋರ್ಟ್‌ಗೆ ನಿರ್ದೇಶನ ನೀಡಬೇಕು' ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಕೀಲ ಅಶ್ವನಿ ಕುಮಾರ್ ದುಬೆ ಅವರ ಮೂಲಕ ಸಲ್ಲಿಸಲಾಗಿರುವ ಪಿಐಎಲ್‌ನಲ್ಲಿ ‘ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಹಾಗೂ ದುರ್ಬಲವಾಗಿರುವ ಭ್ರಷ್ಟಾಚಾರ ನಿಗ್ರಹ ಕಾನೂನುಗಳಿಂದಾಗಿ ಭಾರತ ಭ್ರಷ್ಟಾಚಾರ ನಿಗ್ರಹದ ಶ್ರೇಯಾಂಕದಲ್ಲಿ ಹಿಂದೆ ಉಳಿದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ' ಎಂದು ತಿಳಿಸಲಾಗಿದೆ.

ADVERTISEMENT

'ಸರ್ಕಾರದ ಯಾವ ಇಲಾಖೆಗಳು ಮತ್ತು ಅದರಲ್ಲಿರುವ ಯೋಜನೆಗಳೂ ಭ್ರಷ್ಟಾಚಾರದಿಂದ ಮುಕ್ತವಾಗಿಲ್ಲ' ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.