ADVERTISEMENT

ಭ್ರಷ್ಟಾಚಾರ: ಪರಿಸ್ಥಿತಿ ಸುಧಾರಣೆಗೆ ತಜ್ಞರ ಸಮಿತಿ ರಚನೆ ಕೋರಿ ಅರ್ಜಿ

ಪಿಟಿಐ
Published 13 ಸೆಪ್ಟೆಂಬರ್ 2020, 12:35 IST
Last Updated 13 ಸೆಪ್ಟೆಂಬರ್ 2020, 12:35 IST

ನವದೆಹಲಿ: ಜಾಗತಿಕ ಭ್ರಷ್ಟಾಚಾರ ಸೂಚ್ಯಂಕದಲ್ಲಿ ದೇಶದ ಸ್ಥಾನ ಆತಂಕ ಮೂಡಿಸುತ್ತಿದ್ದು, ಪರಿಸ್ಥಿತಿ ಸುಧಾರಿಸಲು ತಜ್ಞರ ಸಮಿತಿ ರಚಿಸಲು ಕೇಂದ್ರ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿರುವ ಭ್ರಷ್ಟಾಚಾರ ಸ್ಥಿತಿ ಆಧರಿಸಿ ಟ್ರಾನ್ಸ್‌ಪರೆನ್ಸಿ ಇಂಟರ್ ನ್ಯಾಷನಲ್ ಸಂಸ್ಥೆ ರೂಪಿಸುವ ಪಟ್ಟಿಯಲ್ಲಿ 180 ರಾಷ್ಟ್ರಗಳ ಪೈಕಿ ಭಾರತದ ಸ್ಥಾನ 80ನೇಯದಾಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಮುಖಂಡರೂ ಆದ, ವಕೀಲ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದು, ಪಟ್ಟಿಯಲ್ಲಿ ಮೊದಲ 20 ಸ್ಥಾನದಲ್ಲಿರುವ ರಾಷ್ಟ್ರಗಳಲ್ಲಿ ಪಾಲಿಸುತ್ತಿರುವ ವ್ಯವಸ್ಥೆ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಬೇಕು. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದ್ದಾರೆ.

ADVERTISEMENT

ವಕೀಲರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ಉಪಾಧ್ಯಾಯ ಅವರು ಕೇಂದ್ರ, ರಾಜ್ಯ ಸರ್ಕಾರಗಳೇ ಅಲ್ಲದೆ, ಕೇಂದ್ರ ಕಾನೂನು ಆಯೋಗ, ಗೃಹ, ಕಾನೂನು ಸಚಿವಾಲಯವನ್ನು ಪ್ರತಿವಾದಿಯಾಗಿ ಹೆಸರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.