ನವದೆಹಲಿ: ನಕಲಿ ಮತದಾನ ನೋಂದಣಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ನ್ಯಾಯಾಲಯದ ಪಿಐಎಲ್ ವ್ಯಾಪ್ತಿಯನ್ನು ‘ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಪಿಐಎಲ್ ಅನ್ನು ‘ನಕಲಿ’ ಎಂದು ಹೇಳಿತು.
‘ಪಿಐಎಲ್‌ಗೆ ಸಂಬಂಧಿಸಿದಂತೆ ನಮ್ಮ ಕಾನೂನು ವ್ಯಾಪ್ತಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ನಾವು ಅಂತಹ ಕ್ಷುಲ್ಲಕ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ’ ಎಂದು ಸಿಜೆಐ ಹೇಳಿದರು.
ಅರ್ಜಿದಾರರು ಆರ್‌ಟಿಐ ಕಾರ್ಯಕರ್ತರಾಗಿದ್ದು, ಅವರು ಸಲ್ಲಿಸಿರುವ ಅರ್ಜಿ ನಕಲಿ ಮತದಾನ ನೋಂದಣಿಗೆ ಸಂಬಂಧಿಸಿದ್ದು ಎಂದು ಅರ್ಜಿದಾರರ ವಕೀಲರು ಪೀಠಕ್ಕೆ ತಿಳಿಸಿದರು.
ಅರ್ಜಿದಾರರು ಕೆಲವು ಸಂಸದರನ್ನು ಭೇಟಿಯಾಗಿ 1951ರ ಪ್ರಜಾ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ಮಾಡುವಂತೆ ಕೇಳಿಕೊಳ್ಳಬಹುದು ಎಂದು ಹೇಳಿದ ಪೀಠ, ‘ಇವೆಲ್ಲ ನಕಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ’ ಎಂದು ಹೇಳಿ ವಜಾಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.