ADVERTISEMENT

ಜಿಎನ್‌ಸಿಟಿಡಿ ತಿದ್ದುಪಡಿ ಕಾಯ್ದೆ ರದ್ದು ಕೋರಿ ಪಿಐಎಲ್‌

ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

ಪಿಟಿಐ
Published 18 ಮೇ 2021, 8:29 IST
Last Updated 18 ಮೇ 2021, 8:29 IST
ಕೋರ್ಟ್‌
ಕೋರ್ಟ್‌   

ನವದೆಹಲಿ: ದೆಹಲಿ ರಾಷ್ಟ್ರೀಯ ರಾಜಧಾನಿ ಸರ್ಕಾರ ತಿದ್ದುಪಡಿ ಕಾಯ್ದೆಯನ್ನು (ಜಿಎನ್‌ಸಿಟಿಡಿ) ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ತನ್ನ ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ನೀಡಿದೆ.

ಮುಖ್ಯನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರಿರುವ ಪೀಠವು ಗೃಹ ಸಚಿವಾಲಯ ಹಾಗೂ ಲೆಫ್ಟಿನೆಂಟ್‌ ಗವರ್ನರ್ ಕಚೇರಿಗೆ ನೋಟಿಸ್‌ ಜಾರಿ ಮಾಡಿದೆ.

ಈ ತಿದ್ದುಪಡಿ ಕಾಯ್ದೆಯು ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಹೆಚ್ಚು ಅಧಿಕಾರ ನೀಡುತ್ತದೆ.

ADVERTISEMENT

‘ಈ ಅರ್ಜಿಯಲ್ಲಿ ಚುನಾಯಿತ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ ಈ ಪಿಐಎಲ್‌ ಸಮರ್ಥನೀಯವಲ್ಲ’ ಎಂದು ದೆಹಲಿ ಸರ್ಕಾರದ ಪರ ವಕೀಲ ಸಂತೋಷ್‌ ಕೆ.ತ್ರಿಪಾಠಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.