ADVERTISEMENT

ಟ್ರ್ಯಾಕ್ಟರ್‌ಗೆ ಗುದ್ದಿದ ಟ್ರಕ್‌: ಮಥುರಾಕ್ಕೆ ಹೊರಟಿದ್ದ ಆರು ಜನ ಸಾವು

ಪಿಟಿಐ
Published 5 ಆಗಸ್ಟ್ 2023, 12:39 IST
Last Updated 5 ಆಗಸ್ಟ್ 2023, 12:39 IST
ಅಪಘಾತ
ಅಪಘಾತ   

ಹತ್ರಾಸ್‌: ಮಥುರಾಕ್ಕೆ ಹೊರಟ್ಟಿದ್ದ ಟ್ರ್ಯಾಕ್ಟರ್‌ವೊಂದಕ್ಕೆ ಟ್ರಕ್‌ ಡಿಕ್ಕಿಯಾಗಿ ಆರು ಜನ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಲಸೇರ್‌ ಜಿಲ್ಲೆಯಿಂದ ಮಥುರಾದ ಗೋವರ್ಧನಕ್ಕೆ 45 ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರಾಲಿ ಟ್ರ್ಯಾಕ್ಟರ್‌ಗೆ ಸದಬಾದ್‌ ರಸ್ತೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಟ್ರಕ್‌ ಗುದ್ದಿದೆ. ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ADVERTISEMENT

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್‌ ಡ್ರೈವರ್ ಸೇರಿ ಮೂವರನ್ನು ಬಂಧಿಸಲಾಗಿದ್ದು, ಟ್ರಕ್‌ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ದುರಂತಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.