ADVERTISEMENT

ಕಾರ್ನಟ್ ಪ್ರಶಸ್ತಿ ಸ್ವೀಕರಿಸಲಿರುವ ಪಿಯೂಷ್ ಗೋಯಲ್

ಪಿಟಿಐ
Published 29 ಜನವರಿ 2019, 18:17 IST
Last Updated 29 ಜನವರಿ 2019, 18:17 IST
ಪಿಯೂಷ್ ಗೋಯಲ್
ಪಿಯೂಷ್ ಗೋಯಲ್   

ನವದೆಹಲಿ: ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಬುಧವಾರ ಕಾರ್ನಟ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸುಸ್ಥಿರ ಇಂಧನ ಪರಿಹಾರಕ್ಕೆ ನೀಡಿದ ಕೊಡುಗೆಗೆ ಅಮೆರಿಕದ ‘ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಡಿಸೈನ್‌’ ಈ ಪ್ರಶಸ್ತಿಯನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೀಡಿತ್ತು.

ಆದರೆ, ಅಮೃತಸರದಲ್ಲಿ ನಡೆದ ರೈಲು ದುರಂತದಲ್ಲಿ 60 ಮಂದಿ ಮೃತಪಟ್ಟಿದ್ದ ಕಾರಣ ಪ್ರಶಸ್ತಿ ಸ್ವೀಕರಿಸಲು ಪಿಯೂಷ್ ಗೋಯಲ್ ಹೋಗಿರಲಿಲ್ಲ. ಹೀಗಾಗಿ ಪ್ರಶಸ್ತಿ ನೀಡಲು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ತಂಡ ದೆಹಲಿಗೆ ಬಂದಿದೆ. ಇದೇ 30ರಂದು ಪ್ರಶಸ್ತಿ ಪ್ರದಾನ ಮಾಡಲಿದೆ.

ADVERTISEMENT

ದೇಶದ ವಿದ್ಯುತ್ ಕ್ಷೇತ್ರದ ಸುಧಾರಣೆಗೆ ಅವರ ಕೈಗೊಂಡ ಕ್ರಮಗಳು ಮತ್ತು 18,000 ಹಳ್ಳಿಗಿಗೆ ವಿದ್ಯುತ್ ಸಂಪರ್ಕ ವಿಸ್ತರಿಸಿದ್ದಕ್ಕೆ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.