ನವದೆಹಲಿ: ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ನೀಡಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೋಯಲ್ ಅವರಿಗೆ ಈಗಿರುವ ಜವಾಬ್ದಾರಿ ಜತೆಗೆ ಹೆಚ್ಚುವರಿಯಾಗಿ ಈ ಖಾತೆಯ ಜವಾಬ್ದಾರಿ ನೀಡಲು ನಿರ್ದೇಶಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ರಾಮ್‌ವಿಲಾಸ್ ಪಾಸ್ವಾನ್(74) ಅವರು ಗುರುವಾರ ನಿಧನರಾಗಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.