
ನವದೆಹಲಿ: ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ದೇಶದ ಅಭಿವೃದ್ಧಿಗೆ ಅಡ್ಡಪಡಿಸುವ ಕೆಟ್ಟ ರಾಜಕೀಯದಲ್ಲಿ ತೊಡಗಿದ್ದಾರೆ. ಅವರು ದೇಶ ವಿರೋಧಿ ಶಕ್ತಿಗಳ ಕೈಗೊಂಬೆಯಾಗಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಬುಧವಾರ ಆರೋಪಿಸಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿಯೂಷ್ ಗೋಯಲ್, ‘ಗಾಂಧಿ ಕುಟುಂಬವು ರಾಜಿ ಕುಟುಂಬವಾಗಿದೆ. ಕಾಂಗ್ರೆಸ್ ಪಕ್ಷವು ಕೂಡ ರಾಜಿ ಪಕ್ಷವಾಗಿದೆ’ ಎಂದು ಕಿಡಿಕಾರಿದ್ದಾರೆ.
ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಕಾಲದಿಂದಲೂ ಗಾಂಧಿ ಕುಟುಂಬವು ಯಾವಾಗಲೂ ದೇಶ ವಿರೋಧಿ ಶಕ್ತಿಗಳ ಜತೆ ಕೈಜೋಡಿಸುವ ಮೂಲಕ ರಾಷ್ಟ್ರೀಯ ಹಿತಾಸಕ್ತಿಯ ಜತೆ ರಾಜಿ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರು ನಕಾರಾತ್ಮಕ ರಾಜಕೀಯದ ‘ಪೋಸ್ಟರ್ ಬಾಯ್’ ಆಗಿದ್ದಾರೆ ಎಂದು ಪಿಯೂಷ್ ಗೋಯಲ್ ಅವರು ಕಿಡಿಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.