ADVERTISEMENT

ಇಲ್ಲಿ ಸ್ವತಂತ್ರವಾಗಿದ್ದೇನೆ, ಭಾರತ ಬಿಟ್ಟು ಹೋಗಲ್ಲ: ಶೇಖ್‌ ಹಸೀನಾ

ಏಜೆನ್ಸೀಸ್
Published 30 ಅಕ್ಟೋಬರ್ 2025, 6:53 IST
Last Updated 30 ಅಕ್ಟೋಬರ್ 2025, 6:53 IST
ಶೇಖ್‌ ಹಸೀನಾ
ಶೇಖ್‌ ಹಸೀನಾ   

ನವದೆಹಲಿ: ‘ಇಲ್ಲಿ ಸ್ವತಂತ್ರವಾಗಿ ತಿರುಗಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಭಾರತದಲ್ಲಿಯೇ ಉಳಿಯುವ ಯೋಜನೆಯಿದೆ’ ಎಂದು ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರು ಹೇಳಿದ್ದಾರೆ.

ಬಾಂಗ್ಲಾದಲ್ಲಿ ಕಳೆದ ವರ್ಷ ಉದ್ಯೋಗದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಶೇಖ್‌ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನಗೊಂಡಿತ್ತು. ಆಗಸ್ಟ್‌ 5ರಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.

ಈವರೆಗಿನ ಬೆಳವಣಿಗೆಗಳ ಕುರಿತು ಇದೇ ಮೊದಲ ಬಾರಿಗೆ ಸುದ್ದಿಸಂಸ್ಥೆ ರಾಯಿಟರ್ಸ್‌ ಜೊತೆ ಮಾತನಾಡಿರುವ ಹಸೀನಾ, ‘2026ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಅವಾಮಿ ಲೀಗ್ ಸ್ಪರ್ಧಿಸುವ ವಿಶ್ವಾಸವಿದೆ’ ಎಂದಿದ್ದಾರೆ.

ADVERTISEMENT

‘ಅವಾಮಿ ಲೀಗ್ ಮೇಲಿನ ನಿಷೇಧವು ಅನ್ಯಾಯ ಮಾತ್ರವಲ್ಲ. ಅದು ಸ್ವಯಂ ಸೋಲಾಗಿದೆ. ಲಕ್ಷಾಂತರ ಜನರು ನಮ್ಮ ಪಕ್ಷವನ್ನು ಬೆಂಬಲಿಸುತ್ತಾರೆ. ಅವರ್‍ಯಾರು ಮತ ಚಲಾಯಿಸುವುದಿಲ್ಲ. ಮತದಾರರನ್ನು ವಂಚಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಬೆಂಬಲಿಗರು ಚುನಾವಣೆಯನ್ನು ಬಹಿಷ್ಕರಿಸಲಿದ್ದಾರೆ’ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪ ಹಸೀನಾ ಅವರ ಮೇಲಿದ್ದು, ಈ ಕುರಿತ ಪ್ರಕರಣದ ವಿಚಾರಣೆಯನ್ನು ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಮುಕ್ತಾಯಗೊಳಿಸಿದೆ. ನವೆಂಬರ್ 13ಕ್ಕೆ ತೀರ್ಪು ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.