ADVERTISEMENT

Plane Crash: ಪತನಕ್ಕೂ ಮುನ್ನ ಅಪಾಯದ ಸೂಚನೆ ಅರಿತು ಎಟಿಸಿಗೆ ಕರೆ ಮಾಡಿದ್ದ ಪೈಲಟ್

ಏಜೆನ್ಸೀಸ್
Published 12 ಜೂನ್ 2025, 10:09 IST
Last Updated 12 ಜೂನ್ 2025, 10:09 IST
<div class="paragraphs"><p>ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನ</p></div>

ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನ

   

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ಟೇಕ್‌ ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. 

ವಿಮಾನದಲ್ಲಿ 242 ಪ್ರಯಾಣಿಕರು, ಇಬ್ಬರು ಪೈಲಟ್‌ ಮತ್ತು 10 ಮಂದಿ ಕ್ಯಾಬಿನ್‌ ಸಿಬ್ಬಂದಿ ಇದ್ದರು ಎಂದು ಎಎನ್‌ಐ ವರದಿ ತಿಳಿಸಿದೆ. 

ADVERTISEMENT

ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹೇಳಿಕೆ ಪ್ರಕಾರ, ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲಟ್‌ ಕ್ಲೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.

ಕ್ಯಾಪ್ಟನ್ ಸುಮೀತ್ ಅವರು 8,200 ಗಂಟೆಗಳ ಅನುಭವ ಹೊಂದಿರುವ ಲೈನ್ ಟ್ರೈನಿಂಗ್ ಕ್ಯಾಪ್ಟನ್ (LTC) ಆಗಿದ್ದರೆ, ಸಹ ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ.

ಗುರುವಾರ ಮಧ್ಯಾಹ್ನ 1.39ಕ್ಕೆ ರನ್‌ವೇ 23ರಿಂದ ವಿಮಾನ ಟೇಕ್‌ಆಫ್ ಆಗಿತ್ತು. ಕೆಲವೇ ಕ್ಷಣಗಳಲ್ಲಿ ವಾಯು ಸಂಚಾರ ನಿಯಂತ್ರಣ ಘಟಕ (ಎಟಿಸಿ)ಕ್ಕೆ ಅಪಾಯದ ಮುನ್ಸೂಚನೆಯಾಗಿ ಪೈಲಟ್‌ ತುರ್ತು ಕರೆ ಮಾಡಿದ್ದರು, ಎಟಿಸಿ ವಾಪಸ್‌ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಬಳಿಕ ವಿಮಾನ ನಿಲ್ದಾಣದ ಪರಿಧಿಯ ಹೊರಭಾಗದಲ್ಲಿ ವಿಮಾನ ಪತನಗೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು ಎಂದು ಡಿಜಿಸಿಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.