ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಅಹಮದಾಬಾದ್ : ಏರ್‌ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 270 ಜನರ ಪೈಕಿ, 119 ಮಂದಿಯ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆ ಮೂಲಕ ಈವರೆಗೆ ಗುರುತಿಸಲಾಗಿದೆ. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 76 ಮಂದಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
‘ಸಾಧ್ಯವಾದಷ್ಟು ಬೇಗ ಡಿಎನ್ಎ ಪರೀಕ್ಷೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. 72 ತಾಸುಗಳ ಬಳಿಕವೂ ಪರೀಕ್ಷೆ ಫಲಿತಾಂಶ ಲಭ್ಯವಾಗಿಲ್ಲ ಎಂದು ಕೆಲವರು ದೂರುತ್ತಿದ್ದಾರೆ. ಆತಂಕಕ್ಕೊಳಗಾಗದಿರಿ ಎಂದು ಅವರಲ್ಲಿ ಮನವಿ ಮಾಡುತ್ತೇನೆ’ ಎಂದು ಸಿವಿಲ್ ಸೂಪರಿಂಟೆಂಡೆಂಟ್ ಡಾ.ರಾಕೇಶ್ ಜೋಶಿ ಅವರು ತಿಳಿಸಿದರು.
ಏರ್‌ಇಂಡಿಯಾ ವಿಮಾನದಲ್ಲಿದ್ದ 242 ಮಂದಿ ಪೈಕಿ 241 ಮಂದಿ ಮೃತಪಟ್ಟಿದ್ದಾರೆ. ಘಟನಾಸ್ಥಳದಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿ 29 ಮಂದಿ ಮೃತಪಟ್ಟಿದ್ದಾರೆ.
ವಿಮಾನ ಅಪಘಾತ ತನಿಖಾ ಸಂಸ್ಥೆಯು (ಎಎಐಬಿ) ಘಟನೆಯ ತಾಂತ್ರಿಕ ಅಂಶಗಳ ಬಗ್ಗೆ ತನಿಖೆ ನಡೆಸಿದರೆ ಉನ್ನತ ಮಟ್ಟದ ಸಮಿತಿಯು ಸಮಗ್ರ ವಿಶ್ಲೇಷಣೆ ನಡೆಸಿ ವಿಮಾನಯಾನದ ಭವಿಷ್ಯದ ಸುರಕ್ಷತೆಗಾಗಿ ಮಾರ್ಗಸೂಚಿಯನ್ನು ನೀಡುತ್ತದೆಕೆ.ರಾಮಮೋಹನ್ ನಾಯ್ಡು ನಾಗರಿಕ ವಿಮಾನಯಾನ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.