ನವದೆಹಲಿ/ಅಹಮದಾಬಾದ್: ವಿಮಾನ ಅಪಘಾತಕ್ಕೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಕೇಂದ್ರ ಸರ್ಕಾರವು ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯು ದೆಹಲಿಯಲ್ಲಿ ಸೋಮವಾರ ನಡೆಯಿತು. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸಭೆಯ ನೇತೃತ್ವ ವಹಿಸಿದ್ದರು.
ಇನ್ನೊಂದೆಡೆ, ಟಾಟಾ ಸನ್ಸ್ ಮತ್ತು ಏರ್ ಇಂಡಿಯಾ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರು ತಮ್ಮ 700 ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ‘ಅಪಘಾತಕ್ಕೆ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಲಿದೆ. ಅದು ಪೂರ್ಣಗೊಳ್ಳುವವರೆಗೂ ನಾವು ಸಂಯಮದಿಂದ ಇರಬೇಕು. ಇನ್ನಷ್ಟು ಸುರಕ್ಷಿತವಾದ ವಿಮಾನಯಾನ ಸಂಸ್ಥೆಯನ್ನಾಗಿ ರೂಪಿಸಲು ಶ್ರಮಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.