ADVERTISEMENT

ಆರಾಧನಾ ಸ್ಥಳಗಳ ಕಾನೂನು ಸಿಂಧುತ್ವ: ಪಿಐಎಲ್‌ ವಿರೋಧಿಸಿ ‘ಸುಪ್ರೀಂ’ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 15:34 IST
Last Updated 3 ಸೆಪ್ಟೆಂಬರ್ 2022, 15:34 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾನೂನು 1991 ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿರೋಧಿಸಿ ಮುಸ್ಲಿಂ ಸಂಘಟನೆಯೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಲಖನೌನ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಂಪಿಎಲ್‌ಬಿಐ) ಕೋರಿದೆ.

1947 ಆಗಸ್ಟ್‌ 15ರಂದು ಅಸ್ತಿತ್ವದಲ್ಲಿದ್ದಂತೆ ಧಾರ್ಮಿಕ ಸ್ಥಳಗಳ ಸ್ಥಾನಮಾನವನ್ನು ಕಾಯ್ದುಕೊಳ್ಳುವ 1991ರ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇದೇ 9ರಂದು ನಿಗದಿಪಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.