ADVERTISEMENT

ಭಾರತೀಯ ಪಠ್ಯಕ್ರಮದ ವೈದ್ಯಕೀಯ ಶಿಕ್ಷಣ: ಸುಪ್ರೀಂಗೆ ಪಿಐಎಲ್‌

ಉಕ್ರೇನ್‌ನಿಂದ ಮರಳಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2022, 21:33 IST
Last Updated 13 ಮಾರ್ಚ್ 2022, 21:33 IST
   

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಮರಳಿ ಬಂದಿರುವ ವಿದ್ಯಾರ್ಥಿಗಳಿಗೆ ಭಾರತೀಯ ಪಠ್ಯಕ್ರಮದ ಅನುಸಾರ ವೈದ್ಯಕೀಯ ಕೋರ್ಸ್‌ ಮುಂದುವರಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ವಕೀಲರಾದ ರಾಣಾ ಸಂದೀಪ್ ಬುಸ್ಸಾ, ಡಾ.ನೀತು ನಾಯ್ಡು ರಾಯಲಾ ಅವರು ಈ ಪಿಐಎಲ್‌ ಸಲ್ಲಿಸಿದ್ದಾರೆ.

ಉಕ್ರೇನ್‌ನಿಂದ ಬಂದಿರುವ ಭಾರತೀಯ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಮತ್ತು ಅಧ್ಯಯನ ಮುಂದುವರಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.