ADVERTISEMENT

ಔರಂಗಜೇಬ್‌ ಸಮಾಧಿ ಧ್ವಂಸ ಕೋರಿ ಬಾಂಬೆ ಹೈಕೋರ್ಟ್‌ಗೆ ಪಿಐಎಲ್

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 16:07 IST
Last Updated 21 ಮಾರ್ಚ್ 2025, 16:07 IST
   

ಮುಂಬೈ: ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ಧ್ವಂಸಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಲಾಗಿದೆ.

ಪತ್ರಕರ್ತ ಹಾಗೂ ಹೋರಾಟಗಾರ ಕೇತನ್ ತಿರೋಡ್ಕರ್ ಈ ಅರ್ಜಿ ಸಲ್ಲಿಸಿದ್ದಾರೆ.

‘ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಿಂದ ಈ ಸಮಾಧಿ ಹೆಸರನ್ನು ಕೈಬಿಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಆದೇಶಿಸಬೇಕು’ ಎಂದೂ ಅವರು ಪಿಐಎಲ್‌ನಲ್ಲಿ ಕೋರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇನ್ನಷ್ಟೆ ಕೈಗೆತ್ತಿಕೊಳ್ಳಬೇಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.