ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಪಿಜಿ)ಯನ್ನು ಎರಡು ಪಾಳಿಗಳಲ್ಲಿ ನಡೆಸುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರು ದೇಶದಾದ್ಯಂತ ಏಕಕಾಲದಲ್ಲಿ ಪರೀಕ್ಷೆ ನಡೆಸುವಂತೆ ಕೋರಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದರು.
‘ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಮಂಡಳಿ, ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಈ ಸಂಬಂಧ ಒಂದು ವಾರದ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ತಿಳಿಸಿದೆ.
ಜೂನ್ 15ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.