ADVERTISEMENT

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಮೇ 2021, 13:48 IST
Last Updated 19 ಮೇ 2021, 13:48 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲರೊಬ್ಬರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ಸರ್ಕಾರವು ನಡೆಸಿದ ‘ಹತ್ಯಾಕಾಂಡ’ದಲ್ಲಿ ಬಿಜೆಪಿಯ 16 ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮೇ 2ರ ನಂತರ ನಡೆದಿರುವ ಬಿಜೆಪಿ ಬೆಂಬಲಿಗರ ಹತ್ಯೆಗಳ ಕುರಿತ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ವಕೀಲ ಘನಶ್ಯಾಂ ಉಪಾಧ್ಯಾಯ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ADVERTISEMENT

‘ಬಿಜೆಪಿಯ 16 ಕಾರ್ಯಕರ್ತರ ಹತ್ಯಾಕಾಂಡವು ಟಿಎಂಸಿಯ ಗೂಂಡಾಗಳಿಂದ ಆಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಣತಿಯಂತೆ ಇವೆಲ್ಲ ನಡೆದಿವೆ’ ಎಂಬ ಮಾಧ್ಯಮ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.