ADVERTISEMENT

ಆರ್‌ಟಿಐ ವ್ಯಾಪ್ತಿಗೆ ಪಿಎಂ ಕೇರ್ಸ್‌ ಫಂಡ್: ಪಿಎಂಒ ಆಕ್ಷೇಪ, ಹೈಕೋರ್ಟ್‌ ಮೊರೆ

ಪಿಟಿಐ
Published 10 ಜೂನ್ 2020, 14:12 IST
Last Updated 10 ಜೂನ್ 2020, 14:12 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ನೆರವಾಗುವ ದೃಷ್ಟಿಯಿಂದ ಆರಂಭಿಸಿರುವ ‘ಪಿಎಂ ಕೇರ್ಸ್‌ ಫಂಡ್‌’ಅನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಸೇರಿಸಬೇಕು ಎಂಬ ಅರ್ಜಿಗೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಬುಧವಾರ ಆಕ್ಷೇಪ ವ್ಯಕ್ತಪಡಿಸಿತು.

ಸಮ್ಯಕ್‌ ಗಂಗ್ವಾಲ್ ಎಂಬುವವರು ಈ ಸಂಬಂಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಪಿಎಂ ಕೇರ್ಸ್‌ ಫಂಡ್‌ಗೆ ಸಂಬಂಧಿಸಿ ದಾಖಲೆಗಳನ್ನು ಒದಗಿಸಲು ನಿರಾಕರಿಸಿ ಪಿಎಂಒದ ಸಾರ್ವಜನಿಕ ಮಾಹಿತಿ ಅಧಿಕಾರಿ ಜೂನ್‌ 2ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ, ‘ಈ ಅರ್ಜಿ ಸಮರ್ಥನೀಯವೇ ಅಲ್ಲ. ಅಲ್ಲದೇ, ಈ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲವೇಕೆ ಎಂಬ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲಾಗುವುದು’ ಎಂದರು.

ADVERTISEMENT

ನಂತರ, ನ್ಯಾಯಮೂರ್ತಿ ನವೀನ್‌ ಚಾವ್ಲಾ ಅವರು ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.