
ಪ್ರಜಾವಾಣಿ ವಾರ್ತೆ
ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆದ ಜೂನ್ 4ರಂದು ಷೇರು ಮಾರುಕಟ್ಟೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದರ ಕುರಿತು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ವಕೀಲ ವಿಶಾಲ್ ತಿವಾರಿ ಎಂಬುವವರು ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.
‘ಜೂನ್ 4ರಂದು ಷೇರು ಮಾರುಕಟ್ಟೆ ಕುಸಿದ ಪರಿಣಾಮ ಹೂಡಿಕೆದಾರರಿಗೆ ಭಾರಿ ನಷ್ಟ ಉಂಟಾಗಿತ್ತು. ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಸೆಬಿಗೆ ನಿರ್ದೇಶನ ನೀಡಬೇಕು’ ಎಂದೂ ಅವರು ಅರ್ಜಿಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.