ADVERTISEMENT

ಐ.ಟಿ ನಿಯಮಕ್ಕೆ ತಿದ್ದುಪಡಿ: ಡಿ.1ಕ್ಕೆ ತೀರ್ಪು ಪ್ರಕಟ ಸಾಧ್ಯತೆ

ಪಿಟಿಐ
Published 29 ಸೆಪ್ಟೆಂಬರ್ 2023, 15:42 IST
Last Updated 29 ಸೆಪ್ಟೆಂಬರ್ 2023, 15:42 IST
ಬಾಂಬೆ ಹೈಕೋರ್ಟ್‌ 
ಬಾಂಬೆ ಹೈಕೋರ್ಟ್‌    

ಮುಂಬೈ: ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುವ ಸುಳ್ಳು ಸುದ್ದಿ ನಿಯಂತ್ರಿಸುವ ವಿಚಾರವಾಗಿ ಮಾಹಿತಿ ತಂತ್ರಜ್ಞಾನ (ಐ.ಟಿ) ನಿಯಮಗಳಿಗೆ ಈಚೆಗೆ ತಂದಿರುವ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಬಾಂಬೆ ಹೈಕೋರ್ಟ್‌ ಶುಕ್ರವಾರ ಪೂರ್ಣಗೊಳಿಸಿದೆ. 

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರಿದ್ದ ವಿಭಾಗೀಯ ಪೀಠವು ಡಿಸೆಂಬರ್ 1ರಂದು ಆದೇಶ ನೀಡಲು ಯತ್ನಿಸುವುದಾಗಿ ತಿಳಿಸಿದೆ. 

ಈ ಪ್ರಕರಣದಲ್ಲಿ ಆದೇಶ ನೀಡುವವರೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮತ್ತು ತಪ್ಪುದಾರಿಗೆ ಎಳೆಯುವ ಪೋಸ್ಟ್‌ಗಳನ್ನು  ಗುರುತಿಸಲು ಪ್ರತ್ಯೇಕ ಸತ್ಯಶೋಧನಾ ಘಟಕಕ್ಕೆ (ಎಫ್‌ಸಿಯು) ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.