ನವದೆಹಲಿ: ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿರುವುದನ್ನು ಉಲ್ಲೇಖಿಸಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಥಿಕ ಮತ್ತು ಸಾಮಾಜಿಕ ವಾಸ್ತವಗಳನ್ನು ಬಹಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಕುಟುಕಿದ್ದಾರೆ.
ಪಿಆರ್ ಮೂಲಕ ಜನರ ದಾರಿ ತಪ್ಪಿಸುವುದನ್ನು ಬಿಟ್ಟು ಆರ್ಥಿಕ ಸ್ಥಿತಿ ಬಗ್ಗೆ ಗಮನ ಹರಿಸಿ. ಪರಿಹಾರ ಹುಡುಕುವತ್ತ ಕಾರ್ಯೋನ್ಮುಖರಾಗಿ ಎಂದು ಅವರು ಹೇಳಿದ್ದಾರೆ.
ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 77.41 ರೂಪಾಯಿಗೆ ತಲುಪುವ ಮೂಲಕ 75 ವರ್ಷಗಳಲ್ಲೇ ಆಗದಷ್ಟು ಕುಸಿತ ಕಂಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಟೀಕಿಸಿದ್ದಾರೆ.
‘ಮೋದಿ ಸರ್ಕಾರದ ಅಡಿಯಲ್ಲಿ ಭಾರತದ ರೂಪಾಯಿ ಐಸಿಯು ಸೇರಿದೆ. ಸ್ವತಃ ಮೋದಿ ವಯಸ್ಸಿಗಿಂತಲೂ ಹೆಚ್ಚು ಕುಸಿದಿದೆ’ ಎಂದು ಅವರು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.